- Advertisement -
- Advertisement -
ಭೋಪಾಲ್: ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಇಂದು ಅವರು ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಬಗ್ಗೆ ಸ್ವತಃ ಸಿಎಂ ಟ್ವೀಟ್ ಮಾಡಿದ್ದು, ನನಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ನಾನು ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ನಾನು ಎಲ್ಲ ಕೊರೊನಾ ಮಾರ್ಗಸೂಚಿಯನ್ನು ಪಾಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ನನ್ನ ಸಂಪರ್ಕಕ್ಕೆ ಬಂದ ಎಲ್ಲ ಸಹದ್ಯೋಗಿಗಳು ಕೂಡ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ. ಅಲ್ಲದೇ, ನಾನು ವಿಡಿಯೋ ಕಾನ್ಫರೆನ್ಸ್ ಮೂಲಕ ದೈನದಿಂದ ಕೋವಿಡ್-19 ವಿಮರ್ಶೆ ಸಭೆಯಲ್ಲಿ ಭಾಗವಹಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
- Advertisement -