- Advertisement -
- Advertisement -
ವಿಟ್ಲ: ಅಡ್ಯನಡ್ಕ ಮೇಗಿನಪೇಟೆ, ಕ್ಯಾಂಪ್ಕೋ ಬಳಿ ನಿವಾಸಿ, 35 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕೆಲವು ದಿನಗಳ ಹಿಂದೆ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ದೇರಳಕಟ್ಟೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೋವಿಡ್ ಪರೀಕ್ಷೆ ನಡೆಸಿದಾಗ ಸೋಂಕು ಇರುವುದು ದೃಢಪಟ್ಟಿದೆ.
ಇದೀಗ ಅವರ ಸಹೋದರನ ಅಂಗಡಿ ಹಾಗೂ ಮನೆಯನ್ನು ಸೀಲ್ ಮಾಡಲಾಗಿದ್ದು, ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಹೋಂ ಕ್ವಾರಂಟೈನ್ ನಲ್ಲಿ ಇಡಲಾಗಿದೆ.

- Advertisement -