- Advertisement -
- Advertisement -
ವಿಟ್ಲ: ವಿಟ್ಲದ ಕಂಬಳಬೆಟ್ಟು ನಿವಾಸಿಯಲ್ಲಿ ಇಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಕಂಬಳಬೆಟ್ಟು ನಿವಾಸಿ, 75 ವರ್ಷದ ವ್ಯಕ್ತಿಯಲ್ಲಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುಂಬೆ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಕಂಬಳಬೆಟ್ಟು ಭಾಗದ ಮೂವರಲ್ಲಿ ಪಾಸಿಟಿವ್ ಪತ್ತೆಯಾಗಿತ್ತು. ಅವರ ಸಂಪರ್ಕದಿಂದ ಸೋಂಕು ಹರಡಿರುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಈಗಾಗಲೇ ವಿಟ್ಲ ಭಾಗದ ಒಕ್ಕೆತ್ತೂರು, ಕಂಬಳಬೆಟ್ಟು, ಪುಣಚ, ರಾಧುಕಟ್ಟೆ, ಅನಂತಾಡಿ ಕಡೆಗಳಲ್ಲಿ ಕೊರೊನಾ ತನ್ನ ಅಟ್ಟಾಹಾಸ ಮೆರೆದಿದೆ.
- Advertisement -