- Advertisement -
- Advertisement -
ಬೆಂಗಳೂರು: ಮೂರನೇ ಬಾರಿಯ ಕೊರೊನಾ ಪರೀಕ್ಷಾ ವರದಿಯಲ್ಲಿ ಸಚಿವ ಸಿ.ಟಿ ರವಿ ಅವರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಸಿ.ಟಿ ರವಿ ಅವರು ಟ್ವೀಟ್ ಮಾಡಿದ್ದು, ಮೂರನೇ ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸುಲಿದ್ದು ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ ಎಂದಿದ್ದಾರೆ.
ಇನ್ನು ನಾನು, ಮಡದಿ ಪಲ್ಲವಿ, ನನ್ನ ಸಿಬ್ಬಂದಿ ವರ್ಗ ಕೋವಿಡ್19 ಪರೀಕ್ಷೆಗೆ ಒಳಪಟ್ಟಿದ್ದೆವು. ಪಲ್ಲವಿ ಹಾಗೂ ನನ್ನ ಗನ್-ಮ್ಯಾನ್, ಚಾಲಕ ಸೇರಿ ಆಫೀಸ್ ಸಿಬ್ಬಂದಿ ಎಲ್ಲ ರಿಪೋರ್ಟ್ ನೆಗೆಟಿವ್ ಬಂದಿದೆ ಎಂದು ಟ್ವೀಟ್ ಮಾಡಿದ್ದಾರೆ.
- Advertisement -