- Advertisement -
- Advertisement -
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಏರಿಕೆಯಾಗಿದೆ. ಆರೋಗ್ಯ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, ಇದೀಗ ಕೊರೊನಾ ಸೋಂಕಿತರ ಸಂಖ್ಯೆ 11 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 40,425 ಮಂದಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 11,18,043ಕ್ಕೆ ಏರಿಕೆಯಾಗಿದೆ.
ಒಂದೇ ದಿನ 681 ಮಂದಿ ಕೊರೊನಾಗೆ ಬಲಿ
ಒಂದೇ ದಿನ ದೇಶದಲ್ಲಿ 681 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಹೀಗಾಗಿ ಕೊರೊನಾಗೆ ಈವರೆಗೆ ಬಲಿಯಾದವರ ಸಂಖ್ಯೆ 27,497ಕ್ಕೆ ಏರಿದೆ. ಇನ್ನು 11,18,043 ಪ್ರಕರಣಗಳ ಪೈಕಿ 7,00,086 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನುಳಿದಂತೆ 3,90,459 ಪ್ರಕರಣಗಳು ಸಕ್ರೀಯವಾಗಿದೆ ಎಂದು ಮಾಹಿತಿ ನೀಡಿದೆ.
- Advertisement -