Thursday, April 25, 2024
spot_imgspot_img
spot_imgspot_img

ಸಿದ್ದರಾಮಯ್ಯ ಶೀಘ್ರ ಗುಣಮುಖರಾಗುವಂತೆ ರಾಜಕೀಯ ನಾಯಕರ ಹಾರೈಕೆ

- Advertisement -G L Acharya panikkar
- Advertisement -

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೊನಾ ಸೋಂಕು ತಗುಲಿದ ಹಿನ್ನಲೆಯಲ್ಲಿ ಅವರು ಬೇಗ ಗುಣಮುಖರಾಗಲಿ ಎಂದು ರಾಜಕೀಯ ನಾಯಕರು ಹಾರೈಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ವಿಚಾರ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಜನರ ಸೇವೆಯಲ್ಲಿ ತೊಡಗುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ವಿಚಾರ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಜನರ ಸೇವೆಯಲ್ಲಿ ತೊಡಗುವಂತಾಗಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಕೂಡ ಟ್ವೀಟ್ ಮಾಡಿದ್ದು, ವಿಪಕ್ಷನಾಯರು, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ತಿಳಿದು ಬಂದಿದೆ. ರಾಜ್ಯ ಕಂಡ ಆದರ್ಶ ರಾಜಕಾರಣಿ ಅವರು. ಅವರಿಗೆ ಪಾಸಿಟಿವ್ ಬಂದಿರುವುದು ನನಗೆ ನೋವಾಗಿದೆ.ಆದಷ್ಟು ಬೇಗನೆ ಅವರು ಚೇತರಿಸಿಕೊಂಡು ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹಾರೈಸಿದ್ದಾರೆ.

ಮತ್ತೊಂದುಕಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ, ಸಿದ್ದರಾಮಯ್ಯ ಅವರು ಶೀಘ್ರದಲ್ಲಿ ಗುಣಮುಖರಾಗಲಿ ಎಂಟು ಟ್ವೀಟ್ ಮಾಡಿದ್ದಾರೆ.

- Advertisement -

Related news

error: Content is protected !!