ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16 ಲಕ್ಷ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 55,079 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 16,38,871ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 779 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಹೀಗಾಗಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 35,747ಕ್ಕೆ ಏರಿಕೆಯಾಗಿದೆ.
#CoronaVirusUpdates:
— #IndiaFightsCorona (@COVIDNewsByMIB) July 31, 2020
?Total #COVID19 Cases in India (as on July 31, 2020)
▶️64.55% Cured/Discharged/Migrated (1,057,805)
▶️33.27% Active cases (545,318)
▶️2.18% Deaths (35,747)
Total COVID-19 confirmed cases = Cured/Discharged/Migrated+Active cases+Deaths
Via @MoHFW_INDIA pic.twitter.com/jECpl5Pm5z
ಇಲ್ಲಿತನಕ 10,57,806 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 5,45,318 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.