- Advertisement -
- Advertisement -
ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟ ಬೆನ್ನಲ್ಲೇ ರಾಜ್ಯಪಾಲ ಡಾ.ವಜುಭಾಯ್ ವಾಲಾ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದಾರೆ. ಅವರ ವರದಿ ನೆಗೆಟಿವ್ ಬಂದಿದೆ ಎಂದು ರಾಜ್ಯಪಾಲರ ಕಚೇರಿಯಿಂದ ಅಧಿಕೃತ ಮಾಹಿತಿ ಸಿಕ್ಕಿದೆ.
ಕಳೆದ ಶುಕ್ರವಾರ ಸಿಎಂ ಬಿಎಸ್ ವೈ ರಾಜ್ಯಪಾಲರನ್ನು ಭೇಟಿಯಾಗಿದ್ದರು. ಈ ಹಿನ್ನಲೆಯಲ್ಲಿ ರಾಜ್ಯಪಾಲರು, ಅವರ ಆಪ್ತ ಸಹಾಯಕ ಹಾಗೂ ಎಡಿಸಿ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದಾರೆ. ಮೂವರ ವರದಿಯಲ್ಲೂ ನೆಗೆಟಿವ್ ಬಂದಿದೆ.
ಗೃಹ ಸಚಿವರ ಕೊರೊನಾ ವರದಿ ನೆಗೆಟಿವ್:
ಇನ್ನು ಸಿಎಂ ಸಂಪರ್ಕಕ್ಕೆ ಬಂದಿದ್ದ ಬಸವರಾಜ್ ಬೊಮ್ಮಯಿ ಕೂಡ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಅವರ ಪರೀಕ್ಷಾ ವರದಿ ಕೂಡ ನೆಗೆಟಿವ್ ಬಂದಿದೆ.
- Advertisement -