- Advertisement -
- Advertisement -
ಮಂಗಳೂರು: ಕೋವಿಡ್ ಸೋಂಕಿತರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಬಿಪಿಎಲ್, ಎಪಿಲ್ ಕಾರ್ಡ್ ಹೊಂದಿರುವವರು ಮತ್ತು ರೇಶನ್ ಕಾರ್ಡ್ ಇಲ್ಲದವರು, ವಲಸೆ ಕಾರ್ಮಿಕರು ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಪೂಜಾರಿ ತಿಳಿಸಿದ್ದಾರೆ. ಆಧಾರ್ ಕಾರ್ಡ್ ತೋರಿಸಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.
- Advertisement -