- Advertisement -
- Advertisement -
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೊಸ ದಾಖಲೆ ಬರೆದಿದ್ದು,1843 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 25317 ಕ್ಕೆ ಏರಿಕೆಯಾಗಿದೆ. ಅಲ್ಲದೇ ಒಂದು ಬರೋಬ್ಬರಿ 30 ಮಂದಿ ಸಾವನ್ನಪ್ಪಿದ್ದಾರೆ.ಕೊರೊನಾ ಮಹಾಮಾರಿಯ ಆರ್ಭಟಕ್ಕೆ
ಇಂದು ರಾಜಧಾನಿಯಲ್ಲಿ 981 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಸೋಂಕಿತರ ಸಂಖ್ಯೆ 10561 ಕ್ಕೆ ಏರಿಕೆಯಾಗಿದೆ. ಮಾತ್ರವಲ್ಲ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಇದುವರೆಗೆ ಬೆಂಗಳೂರಲ್ಲಿ ಕೊರೊನಾ ಮಹಾಮಾರಿ 155 ಮಂದಿ ಬಲಿಯಾಗಿದ್ದಾರೆ.


ಮಂಗಳೂರು :-ಕರಾವಳಿಯಲ್ಲಿಯೂ ಕೊರೊನಾ ಆರ್ಭಟ ಹೆಚ್ಚುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 34 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.
SARI, ILI ಸೇರಿದಂತೆ ಪ್ರಾಥಮಿಕ ಸಂಪರ್ಕದಿಂದಲೂ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇಂದು ಒಂದೇ ದಿನ ಎರಡು ಮಂದಿ ಬಲಿಯಾಗಿದ್ದರೆ.ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.


- Advertisement -