Wednesday, April 24, 2024
spot_imgspot_img
spot_imgspot_img

*BIG BLAST:-ದಕ್ಷಿಣ ಕನ್ನಡದಲ್ಲಿ 173 , ಉಡುಪಿ 217 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 6805 ಮಂದಿಗೆ ಸೋಂಕು..!*

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 6805 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 93 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 158254 ಕ್ಕೆಏರಿಕೆಯಾಗಿದೆ.ರಾಜ್ಯದಲ್ಲಿ    ಈವರೆಗೆ 80281 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2544 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 15 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2972 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 32314 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 173 ಮಂದಿಗೆ ಸೋಂಕು ತಗುಲಿದೆ. 11 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 107 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 6715 ಆಗಿದ್ದು, ಇಲ್ಲಿಯವರೆಗೆ 3116 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.3398 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 217 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 5359 ಆಗಿದ್ದು ,ಇಲ್ಲಿಯವರೆಗೆ 3058 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2251 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!