Saturday, April 20, 2024
spot_imgspot_img
spot_imgspot_img

ಕೊರೊನಾ ಮಹಾಸುನಾಮಿ:-ದಕ್ಷಿಣ ಕನ್ನಡದಲ್ಲಿ 194 , ಉಡುಪಿ 313 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು ದಾಖಲೆಯ 7178 ಮಂದಿಗೆ ಸೋಂಕು..!*

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 7178 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 93 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 172102 ಕ್ಕೆಏರಿಕೆಯಾಗಿದೆ.ರಾಜ್ಯದಲ್ಲಿ    ಈವರೆಗೆ 89238 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2665 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 18 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2229 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 33726 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 194 ಮಂದಿಗೆ ಸೋಂಕು ತಗುಲಿದೆ. 6 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 183 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 7075 ಆಗಿದ್ದು, ಇಲ್ಲಿಯವರೆಗೆ 3487 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.3374 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 313 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 5918 ಆಗಿದ್ದು ,ಇಲ್ಲಿಯವರೆಗೆ 3260 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2598 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!