Friday, April 19, 2024
spot_imgspot_img
spot_imgspot_img

BIG BLAST:- ದಕ್ಷಿಣ ಕನ್ನಡದಲ್ಲಿ 146 , ಉಡುಪಿ 90 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು ದಾಖಲೆಯ 4267 ಮಂದಿಗೆ ಸೋಂಕು..!*

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 4267 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 114 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 182354 ಕ್ಕೆಏರಿಕೆಯಾಗಿದೆ.ರಾಜ್ಯದಲ್ಲಿ  ಈವರೆಗೆ 99126 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 1243 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 36 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2037 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 32985 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 146 ಮಂದಿಗೆ ಸೋಂಕು ತಗುಲಿದೆ. 8 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 533 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 7353 ಆಗಿದ್ದು, ಇಲ್ಲಿಯವರೆಗೆ 4215 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2910 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 90 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 6290 ಆಗಿದ್ದು ,ಇಲ್ಲಿಯವರೆಗೆ 3462 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2762 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!