ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 5532 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 84 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 134819 ಕ್ಕೆಏರಿಕೆಯಾಗಿದೆ.ರಾಜ್ಯದಲ್ಲಿ ಈವರೆಗೆ 57725 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2105 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 21 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2331 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 37513 ಮಂದಿಯಲ್ಲಿ ಪತ್ತೆಯಾಗಿದೆ.
ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 163 ಮಂದಿಗೆ ಸೋಂಕು ತಗುಲಿದೆ. 10 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 45 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 6015 ಆಗಿದ್ದು, ಇಲ್ಲಿಯವರೆಗೆ 2730 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.3116 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ 182 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 4673 ಆಗಿದ್ದು ,ಇಲ್ಲಿಯವರೆಗೆ 2606 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2032 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.