Thursday, April 25, 2024
spot_imgspot_img
spot_imgspot_img

 *ಕೊರೊನಾ ರಣಕೇಕೆ*:- ರಾಜ್ಯದಲ್ಲಿ ಒಂದೇ ದಿನ 3649 ಮಂದಿಗೆ ಸೋಂಕು..!*

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 3649 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 71,069ಕ್ಕೆ ಏರಿಕೆಯಾಗಿದೆ. ಅಲ್ಲದೇ, 61 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 1714 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 22 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. ನಗರದಲ್ಲಿ ಇಂದು 520 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಕಳೆದ 24 ಗಂಟೆಗಳಲ್ಲಿ 149 ಮಂದಿಗೆ ಸೋಂಕು ತಗುಲಿದೆ. 5 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 127 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 3834 ಆಗಿದ್ದು, ಇಲ್ಲಿಯವರೆಗೆ 1675 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

- Advertisement -

Related news

error: Content is protected !!