- Advertisement -
- Advertisement -
ಬೆಂಗಳೂರು : ಕೊರೊನಾ ಮಹಾಮಾರಿಯ ಆರ್ಭಟ ಸದ್ಯಕ್ಕೆ ಮುಗಿಯುವ ಲಕ್ಷಣಗಳೇ ಗೋಚರಿಸುತ್ತಿಲ್ಲ. ರಾಜ್ಯದಲ್ಲಿಂದು ಬರೋಬ್ಬರಿ 442 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 6 ಮಂದಿಯನ್ನು ಡೆಡ್ಲಿ ಕೊರೊನಾ ಬಲಿ ಪಡೆದಿದೆ.
ಮಂಗಳೂರು:- ಕರಾವಳಿಯಲ್ಲಿಯೂ ಕೊರೊನಾ ಆರ್ಭಟ ಹೆಚ್ಚುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 29 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 486ಕ್ಕೆ ಏರಿಕೆಯನ್ನು ಕಂಡಿದೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆಯೂ ಹೆಚ್ಚುತ್ತಿದ್ದು, ಇದುವರೆಗೆ ಕೊರೊನಾ ಮಹಾಮಾರಿ 10 ಮಂದಿ ಬಲಿಯಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದ್ದರೂ ಕೂಡ ದಿನೇ ದಿನೇ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿದೆ. ಇಂದು ಉಡುಪಿ ಜಿಲ್ಲೆಯಲ್ಲಿ 14 ಮಂದಿಗೆ ಸೋಂಕು ದೃಢಪಟ್ಟಿದೆ.
- Advertisement -