Thursday, August 6, 2026
spot_imgspot_img
spot_imgspot_img

ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಕಸ್ಟಡಿಯಲ್ಲಿ ಮೃತ್ಯು-ಪೊಲೀಸರ ವಿರುದ್ಧ ಚಿತ್ರ ಹಿಂಸೆ ಆರೋಪಿಸಿದ ಕುಟುಂಬ

- Advertisement -
- Advertisement -

ಲಕ್ಕೊ: ಉತ್ತರಪ್ರದೇಶದ ಬಹರಾಯಿಚ್ ಜಿಲ್ಲೆಯಲ್ಲಿ ಹತ್ತು ವರ್ಷದ ಬಾಲಕಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ 55 ವರ್ಷದ ವ್ಯಕ್ತಿಯೋರ್ವ ಪೊಲೀಸ್‌ ಕಸ್ಟಡಿಯಲ್ಲಿ ಮೃತಪಟ್ಟಿದ್ದಾನೆ.

ಪೊಲೀಸರು ನೀಡಿದ ಚಿತ್ರ ಹಿಂಸೆಯಿಂದ ಆತ ಮೃತಪಟ್ಟಿದ್ದಾನೆ ಎಂದು ಕುಟುಂಬ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್‌ ಸಿಬ್ಬಂದಿ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದೆ.ಲೈಂಗಿಕ ದೌರ್ಜನ್ಯದ ದೂರಿನ ಹಿನ್ನೆಲೆಯಲ್ಲಿ ಈ ವ್ಯಕ್ತಿಯನ್ನು ಗುರುವಾರ ಸಂಜೆ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಾಗಿತ್ತು. ಕಿರುಕುಳ ಆರೋಪಕ್ಕೆ ಸಂಬಂಧಿಸಿ ವಿಚಾರಣೆ ನಡೆಸುತಿದ್ದಾಗ ಆತನ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿತು ಎಂದು ಪೊಲೀಸರು ತಿಳಿಸಿದ್ದಾರೆ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ. ಪೊಲೀಸ್‌ ಠಾಣೆಯಲ್ಲಿ ಆತನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ. ಆತ ಸಹಜವಾಗಿ ಮೃತಪಟ್ಟಿಲ್ಲ. ಕಸ್ಟಡಿ ಚಿತ್ರಹಿಂಸೆಯಿಂದ ಆತ ಮೃತಪಟ್ಟಿದ್ದಾನೆ ಎಂದು ಆತನ ಕುಟುಂಬ ಆರೋಪಿಸಿದೆ.

ಆತನ ಕುಟುಂಬದ ದೂರಿನ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆಯ ಉಸ್ತುವಾರಿ ಅಧಿಕಾರಿ (ಎಸ್‌ಎಚ್‌ಒ), ಓರ್ವ ಕಾನ್ಸಬಲ್ ಹಾಗೂ ಇತರ ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆ‌ರ್ ದಾಖಲಿಸಲಾಗಿದೆ.

- Advertisement -

Related news

error: Content is protected !!