Sunday, June 15, 2025
spot_imgspot_img
spot_imgspot_img

ಕೋರ್ಟ್‌ನಿಂದ ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿಗೆ ಸಮನ್ಸ್ ಜಾರಿ..!

- Advertisement -
- Advertisement -

ಬೆಂಗಳೂರು: ಕಾನೂನು ಬಾಹಿರವಾಗಿ ವಿದೇಶಿ ಬಾತುಕೋಳಿಗಳನ್ನು ಸಾಕಿದ್ದಕ್ಕೆ ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ವಿರುದ್ಧ ದೂರು ದಾಖಲಾಗಿದ್ದು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

‘ಬಾರ್ ಹೆಡೆಡ್ ಗೂಸ್’ ಎಂಬ ಬಾತುಕೋಳಿಗಳನ್ನು ಸಾಕಿದ್ದ ದರ್ಶನ್, ಕೆಂಪಯ್ಯನ ಹುಂಡಿಯ ನಟ ದರ್ಶನ್ ತೋಟದ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ವಿದೇಶಿ ಪ್ರಭೇದದ ಬಾತು ಕೋಳಿ ವಶಕ್ಕೆ ಪಡೆದಿದ್ದ ಅಧಿಕಾರಿಗಳು, ದರ್ಶನ್, ವಿಜಯಲಕ್ಷ್ಮಿ, ನಾಗರಾಜ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅಡಿ ಟಿ. ನರಸೀಪುರದ ಸಿವಿಲ್ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು. ಪ್ರಕರಣದ ವಿಚಾರಣೆಯು ನಡೆಯುತ್ತಿದ್ದು, ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದು ಜುಲೈ 4 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಕೋರ್ಟ್ ಸೂಚಿಸಿದೆ.

ಬಾರ್ ಹೆಡೆಡ್ ಗೂಸ್ ಹೆಚ್ಚಾಗಿ ಮಧ್ಯ ಏಷ್ಯಾ ಪ್ರದೇಶದ್ದಾಗಿದ್ದು, ಇವು ವಲಸೆ ಹಕ್ಕಿಗಳಾಗಿವೆ, ಈ ಹಕ್ಕಿಗಳನ್ನು ಸಾಕುವುದು ವನ್ಯಜೀವಿ ಸಂರಕ್ಷಣೆಯ ಕಾಯ್ದೆಯಡಿ ಅಪರಾಧ ಎನಿಸಿಕೊಂಡಿದೆ. ಈ ಹಿಂದೆ ಪ್ರಕರಣ ದಾಖಲಾಗಿದ್ದಾಗ, ಬಾತುಕೊಳಿಗಳನ್ನು ಸ್ನೇಹಿತರು ನೀಡಿದ್ದರು ಎಂದು ದರ್ಶನ್ ಸ್ಪಷ್ಟನೆ ನೀಡಿದ್ದರು. ಬಳಿಕ ಬಾತುಕೋಳಿಗಳನ್ನು ವಶಕ್ಕೆ ಪಡೆದಿದ್ದ ಅಧಿಕಾರಿಗಳು ನಟ ದರ್ಶನ್ ವಿರುದ್ಧ ನಿಷೇಧಿತ ವನ್ಯ ಪಕ್ಷಿಗಳ ಸಾಕಣೆಗಾಗಿ ಪ್ರಕರಣ ದಾಖಲಿಸಿದ್ದರು.

- Advertisement -

Related news

error: Content is protected !!