Friday, April 26, 2024
spot_imgspot_img
spot_imgspot_img

ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ಸರಕಾರ ಅನುಮತಿ

- Advertisement -G L Acharya panikkar
- Advertisement -

ಪುತ್ತೂರು:ಕೋವಿಡ್-19 ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ಸರಕಾರ ಇದೀಗ ಅನುಮತಿ ನೀಡಿದೆ. ಕಂಟೈನ್ಮೆಂಟ್ ಝೋನ್‌ಗಳ ಹೊರತುಪಡಿಸಿ ಇತರೆಲ್ಲಾ ವಲಯಗಳಲ್ಲಿಯೂ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ಸರಕಾರ ಅನುಮತಿಸಿದೆ.

ಕೋವಿಡ್-19 ಸೋಂಕು ನಿಯಂತ್ರಿಸುವ ಸಂಬಂಧ ಹೊರಡಿಸಿರುವ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಗ್ರಂಥಾಲಯ ಪ್ರವೇಶಿಸುವವರನ್ನು ಥರ್ಮಲ್ ತಪಾಸಣೆ ನಡೆಸಿ ಸಂಬಂಧಿಸಿದ ಗ್ರಂಥಾಲಯಗಳ ಮುಖ್ಯಸ್ಥರು ಸಾರ್ವಜನಿಕ ಗ್ರಂಥಾಲಯಗಳ ಸೇವೆಯನ್ನು ಸಾರ್ವಜನಿಕರಿಗೆ ಒದಗಿಸಬೇಕು ಎಂದು ಸರಕಾರ ಆದೇಶಿಸಿದೆ.

- Advertisement -

Related news

error: Content is protected !!