- Advertisement -
- Advertisement -
ಪುತ್ತೂರು:ನಾಳೆಯಿಂದ ಒಂದು ವಾರದ ಕಾಲ ಜಿಲ್ಲೆಯಾದ್ಯಂತ ಲಾಕ್ ಡೌನ್ ಜಾರಿಗೊಂಡಿರುವ ಕಾರಣ ಪುತ್ತೂರು ತಾಲೂಕಿನಲ್ಲಿ ಕೋವಿಡ್-19 ನಿಯಂತ್ರಣ ಕಾಯ್ದು ಕೊಳ್ಳುವ ನಿಟ್ಟಿನಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರ ನೇತೃತ್ವದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೋರ್ಕರ್, ಪುತ್ತೂರು ತಾಲೂಕು ಪಂಚಾಯತ್ ಸ್ಥಾಯಿ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಸಹಾಯಕ ಆಯುಕ್ತರಾದ ಶ್ರೀ ಯತೀಶ್ ಉಳ್ಳಾಲ್, ತಹಶೀಲ್ದಾರ್ ಶ್ರೀ ರಮೇಶ್ ಬಾಬು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಶ್ರೀ ನವೀನ್ ಭಂಡಾರಿ, ನಗರಸಭಾ ಪೌರಾಯುಕ್ತರಾದ ಶ್ರೀಮತಿ ರೂಪಾ ಶೆಟ್ಟಿ, ಡಿವೈಎಸ್ಪಿ ಶ್ರೀ ದಿನಕರ ಶೆಟ್ಟಿ ಹಾಗೂ ಪಂಚಾಯತ್ ನೂತನ ಆಡಳಿತ ಅಧಿಕಾರಿಗಳು ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು.
- Advertisement -