Sunday, June 7, 2026
spot_imgspot_img
spot_imgspot_img

ಮತ್ತೆ ಕೋವಿಡ್ ಪತ್ತೆ- ಕರ್ನಾಟಕದಲ್ಲಿ 8, ದೇಶದಲ್ಲಿ 257 ಕೇಸ್

- Advertisement -
- Advertisement -

ಮತ್ತೆ ಕೋವಿಡ್ ಹೊಸ ಅಲೆ ಶುರುವಾಗಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿದೆ.

ಏಷ್ಯಾದಲ್ಲಿ ಕೋವಿಡ್ ಹಾವಳಿ ಮತ್ತೆ ಶುರುವಾಗಿದ್ದು, ಸಿಂಗಾಪುರ, ಹಾಂಕಾಂಗ್ ಬಳಿಕ ದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ. ಇದುವರೆಗೂ ಭಾರತದಲ್ಲಿ 257 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 8 ಕೇಸ್ ಪತ್ತೆಯಾಗಿದ್ದು, ಕೇರಳದಲ್ಲಿ 69, ಮಹಾರಾಷ್ಟ್ರ 44, ತಮಿಳುನಾಡು 34, ಗುಜರಾತ್, ದೆಹಲಿ, ಹರ್ಯಾಣ, ರಾಜಸ್ಥಾನ, ಸಿಕ್ಕಿಂನಲ್ಲೂ ಪಾಸಿಟಿವ್ ಕೇಸ್‌ಗಳಿವೆ.ಸದ್ಯ ಯಾವುದೇ ರೀತಿಯ ಗಂಭೀರವಾದ ಗುಣಲಕ್ಷಣಗಳು ಕಾಣಿಸಿಕೊಂಡಿಲ್ಲ. ಹೀಗಾಗಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಆದರೆ ನಿರ್ಲಕ್ಷ್ಯ ಬೇಡ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಎಲ್ಲ ಕಡೆ ಸಂದೇಶ ರವಾನಿಸಿದ್ದು, ಕಟ್ಟೆಚ್ಚರ ವಹಿಸಿದೆ.ಈಗಾಗಲೇ ಸಿಂಗಾಪುರ ಮತ್ತು ಹಾಂಗ್‌ಕಾಂಗ್‌ನಲ್ಲಿ ಅಲರ್ಟ್ ಘೋಷಿಸಲಾಗಿದೆ. ಮೇ 03 ರಿಂದ ಮೆ 16ರ ವರೆಗೆ 14,200 ಕೇಸ್ ದಾಖಲಾಗಿದೆ ಎಂದು ಸಿಂಗಾಪುರ ಆರೋಗ್ಯ ಸಚಿವಾಲಯ ತಿಳಿಸಿದೆ.

- Advertisement -

Related news

error: Content is protected !!