

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಪರಿಸ್ಥಿತಿ ನಿಯಂತ್ರಿಸುವುದು ರಾಜ್ಯ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ನಾಳೆ ಕೋವಿಡ್-19 ಕೇರ್ ಸೆಂಟರ್ ಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಲಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿರುವ ಕೋವಿಡ್ ಸೆಂಟರ್ ಗಳಲ್ಲಿ ರೋಗಿಗಳಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಕೊರೊನಾ ರೋಗಿಗಳಿಗೆ ಕೆಲ ಸೆಂಟರ್ ಗಳಲ್ಲಿ ಸರಿಯಾಗಿ ಸೌಲಭ್ಯ ಒದಗಿಸುತ್ತಿಲ್ಲ. ವಿವಿಧ ಪರೀಕ್ಷೆಗಳಿಗೆ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಹಿನ್ನಲೆಯಲ್ಲಿ ಖುದ್ದು ಸಿಎಂ ಬಿಎಸ್ ವೈ ಕೋವಿಡ್-19 ಸೆಂಟರ್ ಗಳಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣ ಪತ್ತೆಯಾಗುತ್ತಿರುವುದು ಬೆಂಗಳೂರಿನಲ್ಲಿ. ಹೀಗಾಗಿ ಪರಿಸ್ಥಿತಿಯನ್ನು ನಿಯಂತ್ರಿಸಲು ಲಾಕ್ ಡೌನ್ ಅವಶ್ಯಕ ಎಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ. ಆದರೆ ಲಾಕ್ ಡೌನ್ ಮಾಡಲ್ಲ ಎಂದಿರುವ ಸರ್ಕಾರ ಮಾತ್ರ ಕೊರೊನಾ ನಿಯಂತ್ರಿಸಲು ಹರಸಾಹಸ ಪಡುತ್ತಿದೆ.