Tuesday, May 21, 2024
spot_imgspot_img
spot_imgspot_img

ದೇಶದಲ್ಲಿ ಇಳಿಕೆಯಾಗುತ್ತಿರುವ ಕೊರೊನಾ ಪ್ರಕರಣ: ಕಳೆದ 24 ಗಂಟೆಯಲ್ಲಿ 724 ಮಂದಿ ಸಾವು, 37,154 ಮಂದಿಗೆ ಪಾಸಿಟಿವ್

- Advertisement -G L Acharya panikkar
- Advertisement -

ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು , ಕಳೆದ 24 ಗಂಟೆಯಲ್ಲಿ 37,154 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, 24 ಗಂಟೆಯಲ್ಲಿ 37,154 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,08,74,376 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 724 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 4,05,899 ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ದೆಶದಲ್ಲಿ 39,649 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿ0ದ ಗುಣಮುಖರಾದವರ ಸಂಖ್ಯೆ 3,00,14,713 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 4,08,764 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

- Advertisement -

Related news

error: Content is protected !!