ಪ್ರತಿ ಕೋವಿಡ್ ರೋಗಿ ಕುಟುಂಬಕ್ಕೆ ಸರ್ಕಾರದಿಂದ ಅಗತ್ಯ ಮೆಡಿಸಿನ್ ಪೂರೈಕೆ
ಬೆಂಗಳೂರು: ಪ್ರತಿ ಕೊರೊನಾ ಸೋಂಕಿತ ವ್ಯಕ್ತಿಯ ಕುಟುಂಬಕ್ಕೆ ಎನ್ 95 ಮಾಸ್ಕ್ ನೀಡಲಾಗುವುದು. ಇದಲ್ಲದೇ, ಅಗತ್ಯ ಮೆಡಿಸಿನ್, ಗ್ಲೌಸ್, ಫೇಸ್ ಶೀಲ್ಡ್,ಥರ್ಮಲ್ ಸ್ಕ್ಯಾನರ್, ಪಿಪಿಇ ಕಿಟ್, ಸ್ಯಾನಿಟೈನ್ ಅನ್ನು ಸರ್ಕಾರದ ವತಿಯಿಂದ ಕೊಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಪ್ರತಿ ವಾರ್ಡ್ ಮೀಸಲಿಟ್ಟುರುವ 20 ಲಕ್ಷ ಹಣದಲ್ಲಿ ಈ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಪೊರೇಟರ್ ನೇತೃತ್ವದಲ್ಲಿ ಮೂವರು ತಂಡ ನೇಮಕ ಮಾಡಲಾಗುತ್ತದೆ. ಪ್ರತಿ ವಾರ್ಡ್ ನಲ್ಲಿ 10 ಮಂದಿಯ ತಂಡ ಸ್ವಯಃಸೇವಕರಾಗಿ ಕಾರ್ಯನಿರ್ವಹಿಸುತ್ತಾರೆ ಎಂದರು.

ರೋಗಿಗಳನ್ನು ಒಂದು ಆಸ್ಪತ್ರೆಯಿಂದ ಇನ್ನೊಂದು ಆಸ್ಪತ್ರೆಗೆ ಅಲೆದಾಡಿಸುವುದು ಮಾನವೀಯತೆ ಅಲ್ಲ. ಒಂದು ವೇಳೆ ಈ ರೀತಿ ಮಾಡಿದ್ರೆ ಖಾಸಗಿ ಆಸ್ಪತ್ರೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ನಿನ್ನೆ ವೈದೇಹಿ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ರೋಗಿಗಳಿಗೆ ಸಹಕಾರ ನೀಡದಿದ್ರೆ ಖಾಸಗಿ ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ರು.
