Monday, May 6, 2024
spot_imgspot_img
spot_imgspot_img

ನಾಳೆಯಿಂದ ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಹಾಕಿಸದೇ ಇದ್ದವರಿಗೆ ಕಠಿಣ ರೂಲ್ಸ್ ಜಾರಿ; ಜಿಲ್ಲಾಧಿಕಾರಿ

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯಲ್ಲಿ ಮಾಲ್ ಮತ್ತು ಚಿತ್ರ ಮಂದಿರಗಳಿಗೆ ಪ್ರವೇಶಕ್ಕೆ ಕೋವಿಡ್ ಲಸಿಕೆ ಕಡ್ಡಾಯ ನಿಯಮವನ್ನು ಜಾರಿಗೆಗೊಳಿಸಿದೆ. ಈ ಕುರಿತು ಜಿಲ್ಲಾಧಿಕಾರಿ ರಾಜೇಂದ್ರ ಅವರು ಮಾಹಿತಿಯನ್ನು ನೀಡಿದ್ದಾರೆ.

ಮಲ್ಟಿಪೆಕ್ಸ್ ಗಳು, ಥಿಯೇಟರ್ ಗಳು, ಚಿತ್ರಮಂದಿರಗಳಿಗೆ ಎರಡು ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರ ನೀಡಿದರೆ ಮಾತ್ರ ತೆರಳಲು ಅವಕಾಶ ನೀಡಲಾಗುವುದು. ಎಲ್ಲರೂ ಲಸಿಕೆಯನ್ನು ಹಾಕಬೇಕು. ಈ ಬಗ್ಗೆ ಕಟ್ಟು ನಿಟ್ಟಾದ ಕ್ರಮವನ್ನು ಜಾರಿಗೆ ತರಲಾಗುವುದು. ಅಧಿಕಾರಿಗಳು ಇನ್ನು ಮುಂದೆ ಸಾರ್ವಜನಿಕವಾಗಿ ಲಸಿಕೆ ಹಾಕದವರಲ್ಲಿ ಪ್ರಶ್ನಿಸಲಿದ್ದಾರೆ ಎಂದು ರಾಜೇಂದ್ರ ಅವರು ಹೇಳಿದ್ದಾರೆ.

driving
- Advertisement -

Related news

error: Content is protected !!