Wednesday, May 15, 2024
spot_imgspot_img
spot_imgspot_img

ಮತ್ತೆ ಏರಿಕೆ ಕಂಡ ಕೊರೊನಾ ಪ್ರಕರಣ..!

- Advertisement -G L Acharya panikkar
- Advertisement -

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನ ಪ್ರಕರಣ ಮತ್ತೆ ಏರಿಕೆಯಾಗಿದೆ. ಒಟ್ಟು 41,157 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಕಳೆದ 24 ಗಂಟೆಯಲ್ಲಿ 518 ಜನರು ಮಹಾಮಾರಿಗೆ ಬಲಿಯಾಗಿದ್ದು, ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 413609ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 422660 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 42,004 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30269796 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 19,36,709 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಕಳೆದ 24ಗಂಟೆಯಲ್ಲಿ 51,01,567 ಜನರಿಗೆ ವ್ಯಾಕ್ಸಿನ್ ಹಾಕಲಾಗಿದೆ. ದೇಶದಲ್ಲಿ ಈವರೆಗೆ 40,49,31,715 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

- Advertisement -

Related news

error: Content is protected !!