- Advertisement -
- Advertisement -
ಅಹಮದಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ತಂಡಗಳ ನಡುವೆ ಇಂದು ನಡೆಯಬೇಕಿದ್ದ ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಈ ಪಂದ್ಯವು ಇಂದು ಅಹಮದಾಬಾದ್‌ನಲ್ಲಿ ನಡೆಯಲಿತ್ತು.

ಕೋಲ್ಕತಾ ನೈಟ್ ರೈಡರ್ಸ್ನ ಇಬ್ಬರು ಆಟಗಾರನಿಗೆ ಕೊವಿಡ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಪಂದ್ಯ ಮುಂದೂಡಲಾಗಿದೆ. ಸ್ಪಿನ್ನರ್ ವರುಣ್ ಚಕ್ರವರ್ತಿ ಹಾಗೂ ಪೇಸರ್ ಸಂದೀಪ್ ವಾರಿಯರ್ ಅವರಿಗೆ ಕರೊನಾ ಸೋಂಕು ತಗುಲಿದೆ.

ಇಂದಿನ ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಸಿಇಒ ಮತ್ತು ಸ್ಥಳದ ಉಸ್ತುವಾರಿ ಅವರಿಂದ ನನಗೆ ಸಂದೇಶ ಬಂದಿದೆ’ ಎಂದು ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಅನಿಲ್ ಪಟೇಲ್ ಸ್ಪಷ್ಟಪಡಿಸಿದ್ದಾರೆ.


- Advertisement -