Tuesday, April 30, 2024
spot_imgspot_img
spot_imgspot_img

ದೇಶದಲ್ಲಿ ಕಳೆದ 6 ದಿನಗಳಿಂದ ಕೋವಿಡ್ ಪ್ರಕರಣ ಇಳಿಕೆಯಾಗಿದೆ : 24 ಗಂಟೆಗಳಲ್ಲಿ 4,194 ಸಾವು

- Advertisement -G L Acharya panikkar
- Advertisement -

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2.57 ಲಕ್ಷ ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 4,194 ಸಾವು ಸಂಭವಿಸಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಮೇ 22) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಕಳೆದ ಆರು ದಿನಗಳಿಂದ ಭಾರತದಲ್ಲಿ 3 ಲಕ್ಷಕ್ಕಿಂತ ಕಡಿಮೆ ಪ್ರಮಾಣದ ಕೋವಿಡ್ ಪ್ರಕರಣ ವರದಿಯಾಗುತ್ತಿದ್ದು, ಕೋವಿಡ್ 19 ಸೋಂಕು ಪೀಡಿತರ ಚೇತರಿಕೆ ಪ್ರಮಾಣವೂ ಹೆಚ್ಚಳವಾಗುತ್ತಿರುವುದಾಗಿ ಅಂಕಿಅಂಶ ತಿಳಿಸಿದೆ.

ದೇಶದಲ್ಲಿ 2,57,299 ಕೋವಿಡ್ ಸೋಂಕು ಪ್ರಕರಣ ವರದಿಯಾಗಿದ್ದು, 3,57,630 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ 29,23,400 ಸಕ್ರಿಯ ಕೋವಿಡ್ ಪ್ರಕರಣಗಳಿವೆ.

driving

ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 2,62,89,290ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 2,95,525 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಅಲ್ಲದೇ 2,30,70,365 ಮಂದಿ ಚೇತರಿಸಿಕೊಂಡಿದ್ದಾರೆ.

- Advertisement -

Related news

error: Content is protected !!