Saturday, April 27, 2024
spot_imgspot_img
spot_imgspot_img

ಬಂಟ್ವಾಳ: ಪಾಣೆಮಂಗಳೂರಿನ ಹಳೆಯ ಉಕ್ಕಿನ ಸೇತುವೆಯಲ್ಲಿ ಬಿರುಕು

- Advertisement -G L Acharya panikkar
- Advertisement -

ಬಂಟ್ವಾಳ: ಪಾಣೆಮಂಗಳೂರು ಕಡೆಯಿಂದ ಬರುವಾಗ ನಾಲ್ಕನೇ ಪಿಲ್ಲರ್ ಬಳಿ ಬಿರುಕು ಕಾಣಿಸಿಕೊಂಡಿದ್ದು, ರಸ್ತೆಯ ಡಾಮರು ಎದ್ದು ಹೋಗಿ ಬಿರುಕು ಗೋಚರಿಸುತ್ತಿದೆ. ಆದರೆ ಇದು ಸೇತುವೆ ಬಿರುಕು ಬಿಟ್ಟಿರುವುದೋ ಅಥವಾ ಮೇಲಿನ ರಸ್ತೆಯ ಭಾಗದಲ್ಲಿ ಮಾತ್ರ ಬಿರುಕು ಕಂಡುಬಂದಿದೆಯೇ ಎಂಬುದು ಖಚಿತಗೊಂಡಿಲ್ಲ. ಈ ಕುರಿತು ಸಂಬಂಧಪಟ್ಟ ತಜ್ಞರು ಪರಿಶೀಲನೆ ನಡೆಸಿ ವರದಿ ನೀಡಬೇಕಿದೆ.

ಈ ಹಿಂದೆ ಬಿ.ಸಿ.ರೋಡ್ ಕಡೆಯಿಂದ ಬರುವ ಗೂಡಿನಬಳಿಯ ಭಾಗದಲ್ಲಿ ಸೇತುವೆ ಕುಸಿತ ಕಂಡು ಬಂದಿತ್ತು. ಹಾಗಾಗಿ ನೂತನ ಸೇತುವೆ ಆ ಸಂದರ್ಭದಲ್ಲಿ ನಿರ್ಮಾಣ ಮಾಡಲಾಗಿತ್ತು. ನೂತನ ಸೇತುವೆ ನಿರ್ಮಾಣ ಆಗುವವರೆಗೆ ಈ ಸೇತುವೆ ಯಾವುದೇ ಘನ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿರಲಿಲ್ಲ. ಆ ಬಳಿಕ ಕುಸಿತ ಕಂಡ ಭಾಗದಲ್ಲಿ ಇಲಾಖೆ ರಿಪೇರಿ ಕಾರ್ಯ ಮಾಡಿತ್ತು. ಆ ಬಳಿಕ ಬಸ್ ಸಹಿತ ಅನೇಕ ಘನ ವಾಹನಗಳು ಈ ಸೇತುವೆಯಲ್ಲಿ ಸಂಚಾರ ನಡೆಸುತ್ತಿದ್ದವು. ಇದೀಗ ಸೇತುವೆಯಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡಿರುವುದು ಸ್ಥಳೀಯರ ಸಂಚಾರಕ್ಕೆ ಅಡ್ಡಿಯಾಗಿ ಪರಿಣಮಿಸಿದೆ.

- Advertisement -

Related news

error: Content is protected !!