Sunday, April 28, 2024
spot_imgspot_img
spot_imgspot_img

ಕ್ರಿಯೇಟಿವ್‌ ಕಾಲೇಜಿನ ಉಪನ್ಯಾಸಕ ಲೇಖಕ ಬಿ ರಾಘವೇಂದ್ರ ರಾವ್‌ ಅವರ 56ನೇ ಕೃತಿ “ಹಾವಿನ ಮನೆ” ಬಿಡುಗಡೆ

- Advertisement -G L Acharya panikkar
- Advertisement -

ರಾಘವೇಂದ್ರ ರಾವ್ ಅವರು ಈಗಾಗಲೇ 55 ಕೃತಿಗಳನ್ನು ಪೂರೈಸಿದ್ದು, 56ನೇ ಕೃತಿ “ಹಾವಿನ ಮನೆ” ಪತ್ತೆದಾರಿ ಕಾದಂಬರಿ ಇತ್ತೀಚೆಗೆ ಬೆಂಗಳೂರಿನ ರಮಣಶ್ರೀ ಹೋಟೇಲಿನಲ್ಲಿ ವೀರಲೋಕ ಪ್ರಕಾಶನದ ವಾರ್ಷಿಕೋತ್ಸವದ ಸುಸಂದರ್ಭದಲ್ಲಿ ಲೋಕಾರ್ಪಣೆಗೊಂಡಿತು. ಈ ಕಾರ್ಯಕ್ರಮದಲ್ಲಿ ಶಿವಾಜಿ ಸುರತ್ಕಲ್‌ ಚಲನಚಿತ್ರ ಖ್ಯಾತಿಯ ನಿರ್ದೇಶಕರಾದ ಆಕಾಶ್‌ ಶ್ರೀವತ್ಸ ಅವರು ಬಿಡುಗಡೆಗೊಳಿಸಿದರು. ಕನ್ನಡ ಸಾಹಿತ್ಯಕ್ಕೆ ಪತ್ತೆದಾರಿ ಸಾಹಿತ್ಯದ ಅಗತ್ಯವಿದೆ. ಅದಕ್ಕೆ ಬಹುದೊಡ್ಡ ಓದುಗ ವರ್ಗವಿದೆ. ಈ ನಿಟ್ಟಿನಲ್ಲಿ ರಾಘವೇಂದ್ರ ರಾವ್ (ಅನು ಬೆಳ್ಳೆ) ಅವರ ʼಹಾವಿನ ಮನೆʼ ಮಹತ್ವದ ಕೃತಿಯಾಗಬಲ್ಲದು ಎಂದು ಅಭಿಪ್ರಾಯಪಟ್ಟರು.

ಆಧುನಿಕ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡು, ಯುವ ಲೇಖಕರಾಗಿ ಪ್ರಸಿದ್ಧಿಗೊಂಡು. ಅನೇಕ ಪತ್ರಿಕೆಗಳಲ್ಲಿ ನಿರಂತರವಾಗಿ ಧಾರಾವಾಹಿಯಾಗಿ ಪ್ರಕಟಗೊಂಡ ಕಥೆಗಳ ಕರ್ತೃವಾಗಿ, ಗುರುತಿಸಿಕೊಂಡು ತಮ್ಮದೇ ಅನುಭವದ ವಿಶೇಷ ಶೈಲಿಯ ಕಥೆಗಳನ್ನು ಪೋಣಿಸಿದ ಲೇಖಕ ಶ್ರೀ ರಾಘವೇಂದ್ರ ರಾವ್‌ ಅವರು. ಅನುಬೆಳ್ಳೆ ಎಂಬ ಕಾವ್ಯನಾಮದಿಂದಲೇ ಹೆಚ್ಚಿನ ಓದುಗರಿಗೆ ಪರಿಚಿತರು. ವೃತ್ತಿಯಲ್ಲಿ ಉಪನ್ಯಾಸಕರು ಪ್ರವೃತ್ತಿಯಲ್ಲಿ ಕಥೆಗಾರರು. ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಓದುಗ ವರ್ಗವನ್ನು ಹೊಂದಿದ್ದಾರೆ. ಕೃತಿಕಾರ ರಾಘವೇಂದ್ರ ರಾವ್‌ ಅವರು ಪ್ರಸ್ತುತ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕ್ರಿಯೇಟಿವ್‌ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಲೇಖಕ ಬಿ ರಾಘವೇಂದ್ರ ರಾವ್‌ ಅವರನ್ನು ಶ್ಲಾಘಿಸಿ ಅಭಿನಂದಿಸಿದ್ದಾರೆ.

- Advertisement -

Related news

error: Content is protected !!