Friday, May 3, 2024
spot_imgspot_img
spot_imgspot_img

ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ ಶಾಸಕರ ಪತ್ನಿಯ ಕಾರು ಜಪ್ತಿ

- Advertisement -G L Acharya panikkar
- Advertisement -

ಕಲಬುರ್ಗಿ,ನ(13): ನಗರದ ಎಂ.ಬಿ. ನಗರದ ಮನೆಯೊಂದರಲ್ಲಿ ಮೂರು ದಿನಗಳ ಹಿಂದೆ ಐಪಿಎಲ್ ಕ್ರಿಕೆಟ್ ಟೂರ್ನಿಯ ಬೆಟ್ಟಿಂಗ್ ನಡೆಯುತ್ತಿದ್ದ ವೇಳೆ ಇಬ್ಬರನ್ನು ವಶಕ್ಕೆ ಪಡೆದಿರುವ ಸೊಲ್ಲಾಪುರ ಸಿಸಿಬಿ‌ ಪೊಲೀಸರು, ಶಾಸಕರ ಪತ್ನಿಯ ಕಾರನ್ನು ಜಪ್ತಿ ಮಾಡಿದ್ದಾರೆ.


ಕಲಬುರ್ಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಅವರ ಪತ್ನಿ ಜಯಶ್ರೀ ಮತ್ತಿಮೂಡ ಹೆಸರಿನಲ್ಲಿರುವ ಇನ್ನೋವಾ ಕ್ರಿಸ್ಟಾ ಕಾರನ್ನು ಪೊಲೀಸರು ವಶಕ್ಕೆ ‌ಪಡೆದಿದ್ದಾರೆ. ಕೆಎ 51, ಎಂ.ಪಿ. 9955 ನೋಂದಣಿಯ‌ ಕಾರು ಶಾಸಕರ ಪತ್ನಿಯ ಹೆಸರಿನಲ್ಲಿದೆ.


ಮಹಾರಾಷ್ಟ್ರ ಪೊಲೀಸರು ‌ಕಲಬುರ್ಗಿ ಪೊಲೀಸರ ಗಮನಕ್ಕೂ ಬಾರದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ‌ಸೊಲ್ಲಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬೆಟ್ಟಿಂಗ್‌ನಲ್ಲಿ ಇನ್ನೂ ಹಲವು ಜನರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರಿಗಾಗಿ ಶೋಧ ಮುಂದುವರಿಸಿದ್ದಾರೆ.


ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಅತುಲ್ ಸಿರಶೆಟ್ಟಿ, ಪ್ರದೀಪ್ ಮಲ್ಲಯ್ಯ ಕಾರಂಜೆ ಎಂಬುವರಿಂದ ‌₹ 38.44 ಲಕ್ಷ ನಗದು, ನಾಲ್ಕು ಲ್ಯಾಪ್‌ಟಾಪ್‌ಗಳು, ಟಿ.ವಿ. ವಶಕ್ಕೆ ಪಡೆದಿರುವ ಮಹಾರಾಷ್ಟ್ರದ ಸೊಲ್ಲಾಪುರದ ಸಿಸಿಬಿ ಪೊಲೀಸರು, ಎರಡು ಕಾರು ಹಾಗೂ ಒಂದು ‌ಸ್ಕೂಟರ್ ಜಪ್ತಿ ‌ಮಾಡಿದ್ದಾರೆ.

- Advertisement -

Related news

error: Content is protected !!