Saturday, April 27, 2024
spot_imgspot_img
spot_imgspot_img

ಮೋದಿ ಸ್ಟೇಡಿಯಂನಲ್ಲಿ ಪಾಕ್‌ಗೆ ಬೆಂಡೆತ್ತಿದ ಭಾರತ, ದಾಖಲೆಗಳ ಸಾಮ್ರಾಜ್ಯ!

- Advertisement -G L Acharya panikkar
- Advertisement -

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟೀಮ್‌ ಇಂಡಿಯಾ ಪಾಕಿಸ್ತಾನ ತಂಡವನ್ನು 7 ವಿಕೆಟ್‌ಗಳಿಂದ ಮಣಿಸಿದೆ. ಅದರೊಂದಿಗೆ ಪಾಕಿಸ್ತಾನದ ವಿರುದ್ಧ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಒಂದೂ ಪಂದ್ಯವನ್ನೂ ಸೋಲದ ದಾಖಲೆಯನ್ನು ಉಳಿಸಿಕೊಂಡಿದೆ. ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಪಾಕ್‌ ವಿರುದ್ಧ 8ನೇ ಗೆಲುವು ಇದಾಗಿದೆ.

ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ನಡೆಸಿ 86 ರನ್ ಗಳಿಸಿ ಪಾಕ್ ಬೌಲರ್​ಗಳ ಬೆವರಿಳಿಸಿದರು. ಈ ಗೆಲುವಿನ ಮೂಲಕ ಭಾರತ ತಂಡ ವಿಶ್ವಕಪ್ ಪಾಯಿಂಟ್ ಟೇಬಲ್​ನಲ್ಲಿ ಆರು ಅಂಕ ಸಂಪಾದಿಸಿ ಅಗ್ರಸ್ಥಾನಕ್ಕೇರಿದೆ.

ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಪಾಕಿಸ್ತಾನ ತಂಡ ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 191 ರನ್​ಗೆ ಆಲೌಟ್ ಆಯಿತು. ಬಳಿಕ ಟಾರ್ಗೆಟ್ ಬೆನ್ನಟ್ಟಲು ಬಂದ ಭಾರತ ಸ್ಫೋಟಕ ಆರಂಭ ಪಡೆದುಕೊಳ್ಳುವ ಜೊತೆಗೆ 2 ಪ್ರಮುಖ ವಿಕೆಟ್ ಕಳೆದುಕೊಂಡಿತು. ಶುಭ್​ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ತಲಾ 16 ರನ್ ಗಳಿಸಿ ಔಟಾದರು. ಆದರೆ, ನಾಯಕ ರೋಹಿತ್ ಶರ್ಮಾ ಮನಬಂದಂತೆ ಬ್ಯಾಟ್ ಬೀಸಿದರು. ಕೇವಲ 36 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು.

63 ಎಸೆತಗಳಲ್ಲಿ 6 ಫೋರ್, 6 ಸಿಕ್ಸರ್ ಚಚ್ಚಿ 86 ರನ್ ಗಳಿಸಿದರು. ಈ ಮೂಲಕ ತಂಡ ಬೇಗನೆ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಶ್ರೇಯಸ್ ಅಯ್ಯರ್ 53 ಹಾಗೂ ಕೆಎಲ್ ರಾಹುಲ್ 19 ರನ್ ಗಳಿಸಿ ಅಜೇಯರಾಗಿ ಉಳಿದರು. ಭಾರತ 30.3 ಓವರ್​ನಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿ ಜಯ ಕಂಡಿತು.

- Advertisement -

Related news

error: Content is protected !!