Wednesday, June 17, 2026
spot_imgspot_img
spot_imgspot_img

ಪುತ್ತೂರು:10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.100/2015ರ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.100/2015ರ ಪ್ರಕರಣದಲ್ಲಿ ಕಲಂ 447, 427, 504 ಹಾಗೂ 506ರಡಿ ದಾಖಲಾಗಿದ್ದು, ಆರೋಪಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ 10 ವರ್ಷಗಳಿಂದ ತಪ್ಪಿಸಿಕೊಂಡಿದ್ದನು.

ಬಂಧಿತ ಆರೋಪಿಯನ್ನು ಸ್ವರೂಪ್ @ ಸ್ವರೂಪ್ ಅಮೀನ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಕೇರಳ ರಾಜ್ಯದ ಮಂಜೇಶ್ವರದ ಪಾವೂರು ಎಂಬ ಸ್ಥಳದಲ್ಲಿ ಪತ್ತೆಹಚ್ಚಿದ ಪೊಲೀಸರು ದಸ್ತಗಿರಿ ಮಾಡಿ, ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Related news

error: Content is protected !!