Thursday, June 25, 2026
spot_imgspot_img
spot_imgspot_img

ಮಂಗಳೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಪ್ರಕರಣದ ಆರೋಪಿ ಪತ್ತೆ

- Advertisement -
- Advertisement -

ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಎಲ್‌ಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಪೊಲೀಸರು ಪತ್ತೆಹಚ್ಚಿದ್ದಾರೆ.

ಆರೋಪಿಯನ್ನು ಕಾರ್ಕಳದ ಕುಂಟಲ್ಪಾಡಿ ನಿವಾಸಿ ಪ್ರಸಾದ್ (33) ಎಂದು ಗುರುತಿಸಲಾಗಿದೆ. 2016ರಲ್ಲಿ ಉತ್ತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 289/2016 ಕಲಂ 379 ಐಪಿಸಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದಆರೋಪಿಯನ್ನು ಮಂಗಳೂರು ಉತ್ತರ ಠಾಣಾ ಪೊಲೀಸರು ಪತ್ತೆಮಾಡಿದ್ದಾರೆ.

ಆರೋಪಿತನ ವಿರುದ್ಧ ಹಿರಿಯಡ್ಕ, ಕೊಣಾಜೆ ಹಾಗೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ಜೂನ್ 24ರಂದು ಮಂಗಳೂರು ಉತ್ತರ ಠಾಣಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಪತ್ತೆಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!