- Advertisement -
- Advertisement -






ಸೇಲಂ: ಶಾಲಾ ಬಸ್ಸಿನ ಸೀಟಿಗಾಗಿ ಇಬ್ಬರು ವಿದ್ಯಾರ್ಥಿಗಳ ನಡುವೆ ನಡೆದ ಜಗಳ ದುರಂತ ಸಾವಿನೊಂದಿಗೆ ಅಂತ್ಯವಾದ ಘಟನೆ ಸೇಲಂ ಜಿಲ್ಲೆಯಲ್ಲಿ ನಡೆದಿದೆ.9 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ಸರವಣನ್ ಮತ್ತು ಕಂದಗುರು ನಡುವೆ ಶಾಲಾ ಬಸ್ಸಿನಲ್ಲಿ ಸೀಟಿನ ಕುರಿತು ಜಗಳ ನಡೆದಿತ್ತು.
ಈ ಜಗಳ ತಾರಕಕ್ಕೇರಿತು, ಮತ್ತು ಆ ಕ್ಷಣದಲ್ಲಿ ಸರವಣನ್ ಕಂದಗುರುವನ್ನು ತಳ್ಳಿದ ಪರಿಣಾಮ ಆತ ಬಿದ್ದು ತಲೆಗೆ ಪೆಟ್ಟು ಬಿದ್ದಿತ್ತು ಎಂದು ಹೇಳಲಾಗಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಸಾಗಿಸಲಾಯಿತಾದರೂ, ಗುರುವಾರ ಬೆಳಗ್ಗೆ ಕಂದಗುರು ಸಾವನ್ನಪ್ಪಿದ್ದಾನೆ.ಘಟನೆಯ ನಂತರ, ಸೇಲಂ ಪೊಲೀಸರು ಸರವಣನ್ನ್ನು ವಶಕ್ಕೆ ಪಡೆದಿದ್ದಾರೆ, ಮುಂದಿನ ಕಾನೂನು ಕ್ರಮಗಳಿಗಾಗಿ ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು. ಹಾಗೂ ವಾಗ್ವಾದಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
- Advertisement -








