- Advertisement -
- Advertisement -



ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ಪ್ರಾಂತ್ಯ ಗ್ರಾಮದ ಲಾಡಿ ಸಮೀಪದ ಅಜಂಕಲ್ಲುವಿನ ನಿವಾಸಿ ಪ್ರಕಾಶ್ (57) ಎಂಬಾತ ಬಂಧಿತ ಆರೋಪಿ.ಆರೋಪಿಯು ತನ್ನ ಮನೆಯ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಾಲಕಿಯ ಮನೆಗೆ ಯಾರೂ ಇಲ್ಲದಾಗ ಕಳೆದ ಒಂದು ವರ್ಷದಿಂದ ಬರುತ್ತಿದ್ದು, ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿರುತ್ತಾನೆ ಎಂದು ಸಂತ್ರಸ್ತೆಯ ಹೆತ್ತವರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.ಪೊಲೀಸರು ಆತನ ವಿರುದ್ಧ ಪೋಕ್ಸೋ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- Advertisement -








