


ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಬರ್ಬರ ಹತ್ಯೆ ಕೃತ್ಯ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬನನ್ನು ಮೂವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್‍ಬಿಆರ್ ಲೇಔಟ್‌ನಲ್ಲಿ, ಆಟೋದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಇಮ್ರಾನ್ ಖಾನ್ (32) ಎಂಬಾತನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹೆಚ್‌ಬಿಆರ್ ಲೇಔಟ್‌ನ 13ನೇ ಕ್ರಾಸ್‌ನಲ್ಲಿ ತಡರಾತ್ರಿ ಘಟನೆ ನಡೆದಿದೆ.
ಆಟೋದಲ್ಲಿ ಬಂದ ಮೂವರು ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಮ್ರಾನ್ ಮೇಲೆ ಮಚ್ಚಿನಿಂದ ಯದ್ವಾತದ್ವಾ ಕೊಚ್ಚಿದ್ದು, ಸ್ಥಳದಲ್ಲೇ ಆತನನ್ನು ಸಾಯಲು ಬಿಟ್ಟು ರಿಕ್ಷಾದಲ್ಲೇ ಪರಾರಿಯಾಗಿದ್ದಾರೆ. ಇಮ್ರಾನ್ ಖಾನ್ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೊಲೆಯ ಹಿನ್ನೆಲೆಯಲ್ಲಿ ಹಳೆ ದ್ವೇಷವನ್ನು ಪೊಲೀಸರು ಶಂಕಿಸಿದ್ದಾರೆ. ಸ್ಥಳೀಯ ಸಿಸಿಟಿವಿ ಫೂಟೇಜ್‌ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.