


ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಮೊಗವಿರಪೇಟೆಯಲ್ಲಿ ಮದುವೆಗೆ ನಿರಾಕರಿಸಿದಕ್ಕೆ ಯುವತಿಗೆ ಯುವಕನೋರ್ವ ಚೂರಿ ಇರಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಇರಿತಕ್ಕೊಳಗಾದ ಯುವತಿ ರಕ್ಷಿತಾ (24) ಎಂದು ತಿಳಿದು ಬಂದಿದೆ.ಆರೋಪಿ ಕಾರ್ತಿಕ್ ಪೂಜಾರಿ ಎಂದು ತಿಳಿದು ಬಂದಿದೆ.ಕಾರ್ತಿಕ್ ಯುವತಿಯನ್ನು ಮದುವೆಯಾಗಬೇಕಾಗಿ ಪೀಡಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದ್ದಾಳೆ.
ಮಾತಿಗೆ ಮಾತು ಬೆಳೆದು ಜಗಳವಾಗಿ ಯುವಕ ಸ್ಥಳದಲ್ಲೇ ಚಾಕುವಿನಿಂದ ಇರಿದಿದ್ದಾನೆ ಯುವತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ .ಜೀವನ್ಮರಣ ಹೋರಾಟದಲ್ಲಿದ್ದ ಯುವತಿಯನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಯುವಕ ಯುವತಿಯನ್ನು ಪ್ರೀತಿಸುತ್ತಿದ್ದು ಮದುವೆ ಆಗಬೇಕು ಎಂದು ಬಹಳ ಸಮಯದಿಂದ ಒತ್ತಾಯಿಸುತ್ತಿದ್ದ. ಆಕೆ ಮತ್ತು ಆಕೆಯ ಮನೆಯವರು ಇದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಇಬ್ಬರಿಗೆ ಜಗಳ ನಡೆಯುತ್ತಿತ್ತು.ಇಂದು ಬೆಳಿಗ್ಗೆ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದಾಗ ಬೆನ್ನತ್ತಿ ಬಂದ ಯುವಕ, ಯುವತಿಯ ಕುತ್ತಿಗೆಗೆ ಚಾಕು ಇರಿದು ಕೊಲೆಗೈಯ್ಯಲು ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








