Saturday, September 5, 2026
spot_imgspot_img
spot_imgspot_img

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯ ಗೋಡೆಗೆ ನೋಟಿಸ್‌ ಅಂಟಿಸಿದ ಬೆಳ್ತಂಗಡಿ ಪೋಲಿಸರು

- Advertisement -
- Advertisement -

ಬೆಳ್ತಂಗಡಿ: ಎಸ್.ಐ.ಟಿ ಶೋಧದ ವೇಳೆ ಅಕ್ರಮವಾಗಿ ಮನೆಯೊಳಗೆ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಸೆ.16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಪ್ರಕರಣ ದಾಖಲು ಮಾಡಿದ್ದು,ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಸೆ.18 ರಂದು ಉಜಿರೆ ತಿಮರೋಡಿ ಮನೆಗೆ ಮಹಜರು ನಡೆಸಲು ಹೋದಾಗ ಕೂಡ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಉಜಿರೆಯ ತಿಮರೋಡಿ ಮನೆಗೆ ಸೆ.19 ರಂದು ಬೆಳಗ್ಗೆ 6 ಗಂಟೆಗೆ ಬೆಳ್ತಂಗಡಿ ಪೊಲೀಸರು ಹೋದಾಗ ಕೂಡ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಇಲ್ಲವಾದ ಕಾರಣ ವಿಚಾರಣೆಗೆ ಸೆ.21 ರಂದು ಹಾಜರಾಗಲು ತಿಮರೋಡಿ ಮನೆಯ ಗೋಡೆಗೆ ನೋಟಿಸ್ ಅನ್ನು ಬೆಳ್ತಂಗಡಿ ಪೊಲೀಸರು ಅಂಟಿಸಿ ಬಂದಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!