Saturday, September 5, 2026
spot_imgspot_img
spot_imgspot_img

ಬೆಳ್ತಂಗಡಿ: ಆಟೋ ರಿಕ್ಷಾದಲ್ಲಿ ಅಕ್ರಮ ಗೋಮಾಂಸ ಸಾಗಾಟ

- Advertisement -
- Advertisement -

ಬೆಳ್ತಂಗಡಿ: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಪತ್ತೆ ಹಚ್ಚಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ಆನಂದ ಎಂ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಬಂದ ಮಾಹಿತಿ ಮೇರೆಗೆ ಅ.23ರಂದು ಆಟೋ ರಿಕ್ಷಾವನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಜಂಕ್ಷನ್ ನಲ್ಲಿ ತಡೆದು ನಿಲ್ಲಿಸಿ ಪರಿಶೀಲನೆಗೆ ಮುಂದಾದಾಗ ರಿಕ್ಷಾ ಚಾಲಕ ಹಕೀಂ ಪೊಲೀಸರನ್ನು ನೋಡಿ ತಪ್ಪಿಸಿಕೊಂಡು ಓಡಿ ಪರಾರಿಯಾಗಿದ್ದಾನೆ.

ಪರಿಶೀಲನೆ ವೇಳೆ ಆಟೋ ರಿಕ್ಷಾದೊಳಗೆ 85 ಕೆ.ಜಿ ಗೋಮಾಂಸ ಪತ್ತೆಯಾಗಿದ್ದು, ಆಟೋದ ಮೌಲ್ಯ ರೂಪಾಯಿ 2,50,000 ಮತ್ತು ಗೋಮಾಂಸದ ಮೌಲ್ಯ 21,250 ರೂಪಾಯಿ ಅಗಿದ್ದು ವಶಪಡಿಸಿಕೊಂಡು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 12 ಕರ್ನಾಟಕ ಗೋವಧೆ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!