- Advertisement -
- Advertisement -
ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನೋರ್ವ ವಿದ್ಯಾರ್ಥಿನಿಗೆ ಮೆಸೇಜ್ ಮಾಡಿದ್ದಾನೆ ಎಂದು ಆರೋಪಿಸಿ ತಂಡವೊಂದು ಹಲ್ಲೆ ಮಾಡಿದ ಘಟನೆ ಸುಬ್ರಹ್ಮಣ್ಯದ ಗುತ್ತಿಗರುವಿನಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ನಿಯಾಝ್ ಎಂದು ಗುರುತಿಸಲಾಗಿದೆ.
ಸ್ಥಳೀಯ ವಿದ್ಯಾರ್ಥಿನಿಯೋರ್ವಳಿಗೆ ನಿಯಾಝ್ ಮೆಸೇಜ್ ಮಾಡುತ್ತಿರುವುದಾಗಿ ತಿಳಿದ ಬಳಿಕ, ಅವನನ್ನು ಕರೆಸಿಕೊಂಡ ಯುವಕರ ತಂಡವೊಂದು ಹಲ್ಲೆ ನಡೆಸಿದ್ದಾರೆ. ಥಳಿತಕ್ಕೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಈ ಪ್ರಕರಣದ ಕುರಿತು, ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -