Monday, June 30, 2025
spot_imgspot_img
spot_imgspot_img

ಪತ್ರಕರ್ತ ಕ್ರೈಂ ಗಣೇಶ್ ಇನ್ನಿಲ್ಲ

- Advertisement -
- Advertisement -

ಕನ್ನಡ ಪತ್ರಿಕಾರಂಗದಲ್ಲಿ ಕ್ರೈಂ ಗಣೇಶ್ ಎಂದೇ ಗುರುತಿಸಿಕೊಂಡಿದ್ದ ಪತ್ರಕರ್ತ ಗಣೇಶ್ ಇಹ ಲೋಕ ತ್ಯಜಿಸಿದ್ದಾರೆ.

ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯದಿಂದಾಗಿ ನಗರದ ಜೈನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಕಸ್ತೂರಿ ಟಿವಿ ಮೂಲಕ ಕಸ್ತೂರಿ ಗಣೇಶ್ ಎಂದು ಪರಿಚಿತರಾಗಿದ್ದ ಗಣೇಶ್ ಅವರ ಕ್ರೈಂ ವರದಿಗಾರಿಕೆಯಲ್ಲಿ ಎತ್ತಿದ ಕೈ . ಅಪರಾಧ ಜಗತ್ತಿನ ಸುದ್ದಿಯನ್ನು ರೋಚಕವಾಗಿ ವರದಿ ಮಾಡುತ್ತಿದ್ದ ಗಣೇಶ್ ಜಿ. ಯುವ ಪತ್ರಕರ್ತರಿಗೆ ಪ್ರೀತಿಯ ಮಾತು ಹಾಗೂ ಪ್ರೋತ್ಸಾಹ ನೀಡುತ್ತಿದ್ದರು

ಕಸ್ತೂರಿ, ನ್ಯೂಸ್ 18, ಪ್ರಜಾ ಟಿವಿಗಳಲ್ಲಿ ಸೇವೆ ಸಲ್ಲಿಸಿದ್ದ ಗಣೇಶ್ ಅವರು ಪ್ರಸ್ತುತ ಟಿವಿ 5 ನಲ್ಲಿ ಇನ್‌ಪುಟ್ ಚೀಫ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಗಣೇಶ್ ಅವರ ನಿಧನಕ್ಕೆ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ವರದಿಗಾರರ ಕೂಟ ಕಂಬನಿ ಮಿಡಿದಿದೆ. ಅದೇ ರೀತಿ ಹಲವಾರು ಗಣ್ಯರು, ಹಿರಿಯ ಪೊಲೀಸ್ ಅಧಿಕಾರಿಗಳು ಗಣೇಶ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ

- Advertisement -

Related news

error: Content is protected !!