Monday, July 20, 2026
spot_imgspot_img
spot_imgspot_img

ವಿಟ್ಲ : ಬಾಡಿಗೆ ಮನೆ ಮೇಲೆ ಪೊಲೀಸ್ ದಾಳಿ: ₹1.79 ಲಕ್ಷ ಮೌಲ್ಯದ MDMA ವಶ, ನಾಲ್ವರು ಆರೋಪಿಗಳ ಬಂಧನ

- Advertisement -
- Advertisement -

ವಿಟ್ಲ: ಮಾದಕ ವಸ್ತು ಮಾರಾಟದ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಳಿ ನಡೆಸಿದ ಪೊಲೀಸರು ₹1,79,700 ಅಂದಾಜು ಮೌಲ್ಯದ 17.97 ಗ್ರಾಂ ಎಂ.ಡಿ.ಎಂ.ಎ (MDMA) ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ನೇರಳಕಟ್ಟೆ ಇಂದಿರಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಶ್ರಫ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಂ.ಡಿ.ಎಂ.ಎ ಸಂಗ್ರಹಿಸಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಮಾಹಿತಿ ಆಧಾರವಾಗಿ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ (ತನಿಖೆ-1) ರತ್ನಕುಮಾರ್ ಎಂ ಅವರ ನೇತೃತ್ವದಲ್ಲಿ ಠಾಣಾ ಸಿಬ್ಬಂದಿ ತಂಡ ದಾಳಿ ನಡೆಸಿತು.

ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಪ್ರದೇಶದಲ್ಲಿರುವ ಮನೆಗೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ ವೇಳೆ ಅಶ್ರಫ್ ಜಿ (38) ಹಾಗೂ ಆತನೊಂದಿಗೆ ಇದ್ದ ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್.ಎ.ರನ್ನು ಪತ್ತೆ ಹಚ್ಚಿದರು. ಮನೆಯ ಪರಿಶೀಲನೆಯ ವೇಳೆ ಒಟ್ಟು 17.97 ಗ್ರಾಂ ತೂಕದ ₹1,79,700 ಅಂದಾಜು ಮೌಲ್ಯದ ಎಂ.ಡಿ.ಎಂ.ಎ ಮಾದಕ ವಸ್ತು, ಒಂದು ಚೂರಿ ಸೇರಿದಂತೆ ಇತರೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 61/2026ರಂತೆ ಎನ್.ಡಿ.ಪಿ.ಎಸ್ ಕಾಯ್ದೆಯ ಕಲಂ 8(C), 22(C) ಹಾಗೂ ಆರ್ಮ್ಸ್ ಆಕ್ಟ್‌ನ ಕಲಂ 27ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

- Advertisement -

Related news

error: Content is protected !!