- Advertisement -
- Advertisement -
ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಅ.ಕ್ರ.ಸಂಖ್ಯೆ 181/2019ರಡಿ ದಾಖಲಾಗಿರುವ ಪ್ರಕರಣದಲ್ಲಿ, ಭಾರತೀಯ ದಂಡ ಸಂಹಿತೆಯ ಕಲಂ 323, 507, 353, 504ರಂತೆ ಆರೋಪಿಯಾಗಿದ್ದ ಕೇರಳದ ಮಂಜೇಶ್ವರ ನಿವಾಸಿ ಮೊಹಮ್ಮದ್ ಫಯಾಜ್ (33) ಹಲವು ದಿನಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ಆರೋಪಿಯನ್ನು ಪತ್ತೆ ಹಚ್ಚುವ ಕಾರ್ಯಾಚರಣೆಯಲ್ಲಿ ವಿಟ್ಲ ಠಾಣೆಯ ಎಎಸ್ಐ ಜಯರಾಮ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಮಾರ್ಚ್ 24, 2026ರಂದು ಮಂಜೇಶ್ವರ ಸಮೀಪದ ಬಾಯಾರು ಪದವು ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದೆ.ಬಂಧಿತನನ್ನು ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಶ್ರೀಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿ ಗೋಪಾಲಕೃಷ್ಣ, ಮಾಯಪ್ಪ ಮತ್ತು ವೆಂಕಪ್ಪ ಭಾಗವಹಿಸಿದ್ದರು.
- Advertisement -








