ಉಡುಪಿ: ಕೋಕಾ ಕಾಯ್ದೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ₹50,000 ನಗದು ಬಹುಮಾನ ಘೋಷಣೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸರು ಪ್ರಕಟಿಸಿದ್ದಾರೆ.

ಮನೋಜ್ ಕುಲಾಲ್ @ ಮನೋಜ್ ಕೋಡಿಕೆರೆ (ತಂದೆ: ಕೃಷ್ಣಪ್ಪ ಬಂಗೇರ), ತೊಕೂರು, ಜೋಕಟ್ಟೆ ಅಂಚೆ, ಮಂಗಳೂರು ನಿವಾಸಿಯಾಗಿದ್ದು, ಮತ್ತೊಬ್ಬ ಆರೋಪಿಯಾದ ಚೇತನ್ @ ಚೇತು ಪಡೀಲ್ (32), ಬಂಟ್ವಾಳ ತಾಲೂಕಿನ ಪೊಳಲಿ ಸಮೀಪದ ರೊಟ್ಟಿಗುಡ್ಡೆ ಹೌಸ್ ನಿವಾಸಿಯಾಗಿದ್ದಾನೆ.ಈ ಇಬ್ಬರು ಕೋಕಾ ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಪ್ರಸ್ತುತ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ಕುರಿತು ಯಾವುದೇ ಮಾಹಿತಿ ನೀಡುವವರಿಗೆ ₹50,000 ನಗದು ಬಹುಮಾನ ನೀಡಲಾಗುವುದು. ಮಾಹಿತಿ ನೀಡಿದವರ ವಿವರವನ್ನು ಸಂಪೂರ್ಣ ಗೌಪ್ಯವಾಗಿ ಇಡಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.ಆರೋಪಿಗಳ ಬಗ್ಗೆ ಸುಳಿವು ಇರುವವರು ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರನ್ನು ಸಂಪರ್ಕಿಸಲು ಸೂಚಿಸಲಾಗಿದೆ.📞 ಸಂಪರ್ಕ ಸಂಖ್ಯೆ: 9480805422 / 08254-232338ಈ ಕುರಿತು ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಪ್ರಕಟಣೆ ನೀಡಿದ್ದಾರೆ.








