- Advertisement -
- Advertisement -




ವಿಜಯಪುರ : ಮೂವರು ಮಕ್ಕಳೊಂದಿಗೆ ತಾಯಿ, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಮಿರಗಿ ಗ್ರಾಮದ ನಿವಾಸಿ ರಾಜಶ್ರೀ ಶಂಕ್ರಪ್ಪ ಹಳ್ಳೂರ (28) , ಅನುಶ್ರೀ (6), ತನು (3) ಮತ್ತು ಸಂತೋಷ್(1) ಮೃತರು ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ವೇಳೆಗೆ ಈ ಘಟನೆ ನಡೆದಿದ್ದು, ಮೊದಲು ಮಕ್ಕಳನ್ನು ಬಾವಿಗೆ ಎಸೆದ ರಾಜಶ್ರೀ, ನಂತರ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ರಾಜಶ್ರೀ ಅವರ ಪತಿ ಶಂಕ್ರಪ್ಪ ಖಾಸಗಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಕೆಲಸದ ನಿಮಿತ್ತ ಅವರು ಊರಿನಲ್ಲಿ ಇಲ್ಲದ ವೇಳೆ ಈ ಘಟನೆ ನಡೆದಿದೆ.
ಘಟನೆಗೆ ಕಾರಣವೇನು ಎಂಬುದು ಸದ್ಯಕ್ಕೆ ನಿಗೂಢವಾಗಿದೆ. ವಿಷಯ ತಿಳಿದ ಕೂಡಲೇ ಇಂಡಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
- Advertisement -








