Friday, April 26, 2024
spot_imgspot_img
spot_imgspot_img

ಹೀನಾಯವಾಗಿ ಸೋಲುಂಡ ಚೆನ್ನೈ ಸೂಪರ್‌ಕಿಂಗ್ಸ್!

- Advertisement -G L Acharya panikkar
- Advertisement -

ಶಾರ್ಜಾ: ಚೆನ್ನೈ ಸೂಪರ್‌ಕಿಂಗ್ಸ್ ತಂಡ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಲೀಗ್ ಹಂತದಲ್ಲಿಯೇ ನಿರ್ಗಮನ ಕಂಡಿದೆ.
ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಎದುರು ಹೀನಾಯವಾಗಿ ಸೋಲುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ 13ನೇ ಆವೃತ್ತಿಯ ಐಪಿಎಲ್ ಪ್ಲೇಆಫ್ ನಿಂದ ಹೊರಬಿದ್ದಿದ್ದು, ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿ ಪ್ಲೇಆಫ್ ತಲುಪದೆ ಗ್ರೂಪ್ ಹಂತದಲ್ಲೇ ನಿರ್ಗಮಿಸಿದೆ.


ಬ್ಯಾಟಿಂಗ್ ವೈಫಲ್ಯ ಕಂಡ ಎಂಎಸ್ ಧೋನಿ ಬಳಗ 10 ವಿಕೆಟ್‌ಗಳಿಂದ ಹೀನಾಯವಾಗಿ ಶರಣಾಯಿತು. ಈ ಗೆಲುವಿನೊಂದಿಗೆ ಐಪಿಎಲ್-13ರ ಉದ್ಘಾಟನಾ ಪಂದ್ಯದಲ್ಲಿ ಸಿಎಸ್‌ಕೆ ಎದುರು ಅನುಭವಿಸಿದ್ದ ಸೋಲಿಗೆ ಸೇಡು ತೀರಿಸಿಕೊಂಡ ಮುಂಬೈ ತಂಡ ಅಂಕಪಟ್ಟಿಯಲ್ಲೂ ಅಗ್ರಸ್ಥಾನಕ್ಕೇರಿತು.


ಶುಕ್ರವಾರ ನಡೆದ ಟೂರ್ನಿಯ 41ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಸಿಎಸ್‌ಕೆ ತಂಡ ವೇಗಿಗಳಾದ ಟ್ರೆಂಟ್ ಬೌಲ್ಟ್ (18ಕ್ಕೆ 4) ಮತ್ತು ಜಸ್‌ಪ್ರೀತ್ ಬುಮ್ರಾ (25ಕ್ಕೆ 2) ಮಾರಕ ದಾಳಿಗೆ ತತ್ತರಿಸಿ ಅಲ್ಪಮೊತ್ತಕ್ಕೆ ಕುಸಿಯುವ ಭೀತಿ ಎದುರಿಸಿತು. ಸ್ಯಾಮ್ ಕುರ್ರನ್ ಮಾತ್ರ ತಂಡದ ಪರ ಏಕಾಂಗಿ ಹೋರಾಟ ಪ್ರದರ್ಶಿಸಿದರು. ಕುರ್ರನ್ 47 ಎಸೆತಗಳಲ್ಲಿ 52 ರನ್ ಬಾರಿಸಿದರು. ಒಂದು ಹಂತದಲ್ಲಿ ಚೆನ್ನೈ ಕೇವಲ 3 ರನ್ ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ವೇಳೆ ತಂಡಕ್ಕೆ ಕುರ್ರನ್ ಅರ್ಧಶತಕ ಬಾರಿಸುವ ಮೂಲಕ ನೆರವಾದರು.


ಮುಂಬೈ ಇಂಡಿಯನ್ಸ್ ಪರ ಟೆಂಟ್ ಬೌಲ್ಟ್ 4, ಬುಮ್ರಾ ಹಾಗೂ ರಾಹುಲ್ ಚಾಹರ್ ತಲಾ 2 ವಿಕೆಟ್ ಪಡೆದರು.
115 ರನ್ ಗಳ ಸುಲಭ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಕೇವಲ 12.2 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೇ ಗುರಿ ತಲುಪಿತು. ಆರಂಭಿಕ ಆಟಗಾರರಾದ ಕ್ವಿಂಟನ್ ಡಿಕಾಕ್ 46 (37ಎಸೆತ) ಮತ್ತು ಇಶಾನ್ ಕಿಶಾನ್ 68 ( 37 ಎಸೆತ) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

ಈ ಸೋಲಿನೊಂದಿಗೆ ಮೂರು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ನ ಪ್ಲೇಆಫ್ ಬಾಗಿಲು ಬಂದಾಯಿತು. ತಾನಾಡಿದ 11 ಪಂದ್ಯಗಳಲ್ಲಿ ಚೆನ್ನೈ ಕೇವಲ 3 ಪಂದ್ಯಗಳಲ್ಲಿ ಮಾತ್ರ ಜಯಗಳಿಸಿದ್ದು, 8ರಲ್ಲಿ ಸೋತಿದೆ.

- Advertisement -

Related news

error: Content is protected !!