Saturday, June 13, 2026
spot_imgspot_img
spot_imgspot_img

ಸಚಿವ ಸ್ಥಾನಕ್ಕೆ .ಟಿ.ರವಿ ರಾಜೀನಾಮೆ.

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಸಿ.ಟಿ.ರವಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿ.ಟಿ.ರವಿ ಶನಿವಾರ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪನವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೊದಲು ಸಿ.ಟಿ.ರವಿ ಅವರು ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದರು.

ಗಾಂಧಿ ಜಯಂತಿಯಂದು ಸಿಎಂ ಬಿಎಸ್​ವೈ ಸಿಗದ ಕಾರಣ ನಿನ್ನೆ ಅಂದರೆ ಶನಿವಾರ ರಾಜೀನಾಮೆ ಕೊಟ್ಟಿದ್ದಾರೆ.  ಸಿ.ಟಿ.ರವಿ ಅವರು ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾಗಿದ್ದರು. ನಿನ್ನೆ ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಸಿ.ಟಿ.ರವಿ ಅವರ ರಾಜೀನಾಮೆಯನ್ನು ಸಿಎಂ ಬಿಎಸ್​ವೈ ಇನ್ನೂ ಸಹ ಅಂಗೀಕರಿಸಿಲ್ಲ.

ಸಿ.ಟಿ.ರವಿ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಾಗ ಪಕ್ಷ ಬಯಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅಂತೆಯೇ ಈಗ ಕೊಟ್ಟ ಮಾತಿನಂತೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

- Advertisement -

Related news

error: Content is protected !!