Friday, April 26, 2024
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ

- Advertisement -G L Acharya panikkar
- Advertisement -

ಮಂಗಳೂರು: ಕೇರಳ, ಕರ್ನಾಟಕ ಗಡಿ ಜಿಲ್ಲೆಯಲ್ಲಿ ಕೊರೊನಾ ಉಲ್ಬಣ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಾದ್ಯಂತ ವಾರಾಂತ್ಯ ಕರ್ಫ್ಯೂ ಕಳೆದ ವಾರದಂತೆ ಈ ವಾರವು ಮುಂದುವರಿಯಲಿದೆ. ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರ ವರೆಗೆ ಜಾರಿಯಲ್ಲಿರಲಿದೆ. ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಇಲ್ಲ. ಆದರೆ ರಾತ್ರಿ ಚಾಲ್ತಿಯಲ್ಲಿದೆ.

ಈ ವೇಳೆ ಕಳೆದ ವಾರದಂತೆ ಅಗತ್ಯ ವಸ್ತುಗಳ ಖರೀದಿಗೆ ಅಪರಾಹ್ನ 2 ಗಂಟೆಯವರೆಗೆ ಅವಕಾಶವಿರಲಿದೆ. ಉಳಿದಂತೆ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಶನಿವಾರ ನಡೆಯಲಿರುವ ವಿ.ವಿ. ಪದವಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ರವಿವಾರ ನಡೆಯಲಿರುವ ಸ್ವಾತಂತ್ರ‍್ಯ ದಿನಾಚರಣೆಯನ್ನು ಕೂಡ ನಿಗದಿತ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಇಲ್ಲದೆ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದೆ.

- Advertisement -

Related news

error: Content is protected !!