Wednesday, October 21, 2026
spot_imgspot_img
spot_imgspot_img

ಇಂದು ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ!!

- Advertisement -
- Advertisement -

ಮಂಗಳೂರು : ರಾಜ್ಯದ ಹಲವು ಕಡೆ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇದೀಗ ಮಂಗಳೂರಿನಲ್ಲಿ ಕೂಡ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದ್ದು, ಡಿ.31 ರ ಸಂಜೆ 6 ಗಂಟೆಯಿಂದ ಜನವರಿ 1 ರ ಬೆಳಗ್ಗೆ 6 ಗಂಟೆವರೆಗೆ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ನಿಯಮ ಮೀರಿ ವಾಹನ ಸಂಚಾರ ನಡೆಸಿದ್ರೆ ವಾಹನಗಳನ್ನು ಸೀಜ್ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು, ಸಾರ್ವಜನಿಕ ಸ್ಥಳಗಳಲ್ಲಿ ಸಂಭ್ರಮಾಚರಣೆ, ಪಾರ್ಟಿ ಆಯೋಜನೆ ಮಾಡಿದ್ರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಮಂಗಳೂರಿನ ಬೀಚ್ ಗಳಿಗೆ ಕೂಡ ನಿರ್ಬಂಧ ಹೇರಲಾಗಿದ್ದು, ನಿರ್ಬಂಧ ಉಲ್ಲಂಘಿಸಿದ್ರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ವಿಕಾಸ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

- Advertisement -

Related news

error: Content is protected !!